ಹೊಸದಿಲ್ಲಿ:ಇನ್ನು ಮುಂದೆ ಸೂಕ್ತ ರೀತಿಯ ವ್ಯವಸ್ಥೆ ಇರುವ ಆಸ್ಪತ್ರೆಗಳಲ್ಲಿ ಸೂರ್ಯಾಸ್ತದ ಬಳಿಕವೂ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಅವಕಾಶ ಸಿಗಲಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.
ಹತ್ಯೆ, ಆತ್ಮಹತ್ಯೆ, ಅತ್ಯಾಚಾರ, ಸಂಶಯಾತ್ಮಕ ಸಾವು, ಕೊಳೆತ ಶವಗಳು ಪತ್ತೆಯಾದ ಪ್ರಕರಣಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ.