ಮಂಗಳೂರು:ದರ್ಗಾ ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ಹಿಂದೂ ಶೈಲಿಯ ದೇವಸ್ಥಾನ ಪತ್ತೆಯಾಗಿದೆ. ಮಂಗಳೂರು ನಗರದ ಹೊರ ವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನ ಪತ್ತೆಯಾಗಿದೆ.
ನವೀಕರಣದ ವೇಳೆ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾ ಮುಂಭಾಗವನ್ನು ಕೆಡವಲಾಗಿತ್ತು. ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾದ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿದೆ. ದರ್ಗಾದಲ್ಲಿ ಜೈನ ಅಥವಾ ಹಿಂದೂ ದೇವಸ್ಥಾನ ಇದ್ದಿರಬಹುದು ಅನ್ನುವಂತ ಅನಿಸಿಕೆಗಳು ಗೋಚರ ಆಗಿದೆ.
ಈಗಾಗಲೇ ಜಿಲ್ಲಾಡಳಿತದ ಸೂಚನೆ ಮೇರೆಗೆ ಕೆಡಹುವ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಬಗ್ಗೆ
ಪೊಲೀಸ್ ಆಯುಕ್ತ ಶಶಿಕುಮಾರ್ ರವರ ಬಳಿ ಮಾಹಿತಿ ಕೇಳಿದಾಗ ನಾನು
ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಮತ್ತು
ಸ್ಥಳೀಯರ ಜೊತೆ ಮಾತುಕತೆ ನಡೆಸಿ.ಸ್ಥಳದಲ್ಲಿ ಅಗತ್ಯ ಬಂದೋಬಸ್ತ್ ಮಾಡಲಾಗಿದೆ ಎಂದರು