ಮಂಗಳೂರು:ಸುರತ್ಕಲ್‌ನಲ್ಲಿ ಆರು ಬಾಂಗ್ಲಾದೇಶಿ ಪ್ರಜೆಗಳ ಪತ್ತೆ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ)ಗೆ ವರದಿ ಸಲ್ಲಿಸಲಾಗುತ್ತಿದ್ದು, ಅಲ್ಲಿಂದ ಆದೇಶ ಬಂದ ಬಳಿಕ ಸಂಬಂಧಪಟ್ಟವರನ್ನು ವಶಕ್ಕೆ ಪಡೆದು ಕಾನೂನು ಪ್ರಕ್ರಿಯೆಯಂತೆ ಸ್ವದೇಶಕ್ಕೆ ಗಡಿಪಾರು ಮಾಡುವ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅಕ್ರಮ ವಲಸಿಗರ ಪತ್ತೆಗಾಗಿ ಕರಾವಳಿ ಭಾಗದಲ್ಲಿ ಪೊಲೀಸ್ ಇಲಾಖೆ ವಿಶೇಷ ತಪಾಸಣೆ ನಡೆಸುತ್ತಿದ್ದು, ಅದರ ಅಂಗವಾಗಿ ಸುರತ್ಕಲ್‌ನಲ್ಲಿ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಈ ವಿದೇಶಿ ಪ್ರಜೆಗಳನ್ನು ಗುರುತಿಸಲಾಗಿದೆ.

ಪ್ರಸ್ತುತ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಎಫ್‌ಆರ್‌ಆರ್‌ಒ ನಿರ್ದೇಶನದಂತೆ ಮುಂದಿನ ಕಾನೂನು ಕ್ರಮ ಜರುಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Poll 

आप अपने सहर के वर्तमान बिधायक के कार्यों से कितना संतुष्ट है ?

View Results

Loading ... Loading ...


Related Articles