ಬಿಜೆಪಿ MLC ಸಿಟಿ ರವಿಯನ್ನು ಬಂಧಿಸಿದ ಪೊಲೀಸರು

ಬೆಳಗಾವಿ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಆರೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ರವಿ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಇದೀಗ ಪೊಲೀಸರು ಸಿಟಿ ರವಿ ಅವರನ್ನು ಬಂಧನವಾಗಿದೆ. ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ.​ ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಇಬ್ಬರು ಎಸ್‌ಪಿ ರ್ಯಾಂಕ್​ನ ಅಧಿಕಾರಿಗಳು, ನಾಲ್ಕು ಎಸ್ಕಾರ್ಟ್, ಎರಡು ಕೆಎಸ್‌ಆರ್‌ಪಿ ತುಕಡಿ ಭದ್ರತೆಯಲ್ಲಿ ಸಿಟಿ ರವಿ ಕರೆದುಕೊಂಡು ಹೋಗಲಾಗಿದೆ.


Poll 

आप अपने सहर के वर्तमान बिधायक के कार्यों से कितना संतुष्ट है ?

View Results

Loading ... Loading ...


Related Articles