ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಉದ್ಘಾಟನೆ ‘ಆರೋಗ್ಯ ಬೈ ಆರ್‌ವಿಆರ್’ ಯೋಜನೆ ದೇಶಾದ್ಯಂತ ವಿಸ್ತರಣೆ

ಮಂಗಳೂರು: ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆ ಒದಗಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆರ್‌ವಿಆರ್ ಹೆಲ್ತ್‌ಕೇರ್, ಕೇರಳದ ಕಾಸರಗೋಡಿನಲ್ಲಿ ಜುಲೈ 27ರಂದು ಅತ್ಯಾಧುನಿಕ ನ್ಯೂರೋ-ಆಂಕಾಲಜಿ ಕೇಂದ್ರವನ್ನು ಆರಂಭಿಸಲಿದ್ದು, ತನ್ನ ಸಮುದಾಯ ಆರೋಗ್ಯ ಕಾರ್ಯಕ್ರಮ ‘ಆರೋಗ್ಯ ಬೈ ಆರ್‌ವಿಆರ್’ ಅನ್ನು ದೇಶಾದ್ಯಂತ ವಿಸ್ತರಿಸುವುದಾಗಿ ಘೋಷಿಸಿದೆ.

 ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕ ಹಾಗೂ ಹಿರಿಯ ನರಶಸ್ತ್ರಚಿಕಿತ್ಸಕರಾದ ಡಾ. (ಪ್ರೊ.) ರಾಘವೇಂದ್ರ ಬಿ. ಎಸ್. ಈ ಮಾಹಿತಿ ನೀಡಿದರು.

2026ರ ಏಪ್ರಿಲ್‌ನಲ್ಲಿ ಆರಂಭಗೊಂಡ ಆರ್‌ವಿಆರ್ ಹೆಲ್ತ್‌ಕೇರ್, ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ, ಅನುಭವಿ ತಜ್ಞ ವೈದ್ಯರ ತಂಡ ಹಾಗೂ ರೋಗಿಕೇಂದ್ರಿತ ಚಿಕಿತ್ಸಾವ್ಯವಸ್ಥೆಯ ಮೂಲಕ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಅವರು ತಿಳಿಸಿದರು.

ಜುಲೈ 27ರಂದು ಕಾಸರಗೋಡಿನಲ್ಲಿ ಆರಂಭಗೊಳ್ಳಲಿರುವ ನ್ಯೂರೋ-ಆಂಕಾಲಜಿ ಕೇಂದ್ರದಲ್ಲಿ ಮೆದುಳು ಹಾಗೂ ನರವ್ಯವಸ್ಥೆಗೆ ಸಂಬಂಧಿಸಿದ ಕ್ಯಾನ್ಸರ್ ಸೇರಿದಂತೆ ಸಂಕೀರ್ಣ ಕಾಯಿಲೆಗಳ ನಿರ್ಣಯ, ಚಿಕಿತ್ಸೆ ಮತ್ತು ಸಮಗ್ರ ಆರೈಕೆಗೆ ಅಗತ್ಯವಿರುವ ಅತ್ಯಾಧುನಿಕ ಸೌಲಭ್ಯಗಳು ಲಭ್ಯವಾಗಲಿವೆ. ಇದರಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕೇರಳ ಭಾಗದ ರೋಗಿಗಳಿಗೆ ವಿಶೇಷ ವೈದ್ಯಕೀಯ ಸೇವೆ ಸ್ಥಳೀಯವಾಗಿ ಸುಲಭವಾಗಿ ದೊರೆಯಲಿದ್ದು, ದೂರದ ನಗರಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಲಿದೆ ಎಂದು ಹೇಳಿದರು.

ಸಂಸ್ಥೆಯ ಮಹತ್ವಾಕಾಂಕ್ಷಿ ಸಮುದಾಯ ಆರೋಗ್ಯ ಕಾರ್ಯಕ್ರಮವಾದ ‘ಆರೋಗ್ಯ ಬೈ ಆರ್‌ವಿಆರ್’ ಯೋಜನೆಯಡಿ ಉಚಿತ ಆರೋಗ್ಯ ತಪಾಸಣೆ, ತಜ್ಞ ವೈದ್ಯರ ಸಮಾಲೋಚನೆ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ. ಈ ಯೋಜನೆಯನ್ನು ಕರ್ನಾಟಕ, ಕೇರಳ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಗೆ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.ಸಂಸ್ಥಾಪಕ ಹಾಗೂ ಅಧ್ಯಕ್ಷ ವಿಜಯ್ ಎಂ.ಎನ್. ಶೆಟ್ಟಿ ಅವರ ನೇತೃತ್ವದಲ್ಲಿ ಆರ್‌ವಿಆರ್ ಹೆಲ್ತ್‌ಕೇರ್ ತನ್ನ ಆರೋಗ್ಯ ಸೇವೆಯ ವ್ಯಾಪ್ತಿಯನ್ನು ನಿರಂತರವಾಗಿ ವಿಸ್ತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಇನ್ನಷ್ಟು ಸೂಪರ್ ಸ್ಪೆಷಾಲಿಟಿ ಕೇಂದ್ರಗಳನ್ನು ಆರಂಭಿಸುವ ಗುರಿಯನ್ನು ಹೊಂದಿದೆ ಎಂದು ಡಾ. ರಾಘವೇಂದ್ರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆರ್‌ವಿಆರ್ ಹೆಲ್ತ್‌ಕೇರ್ ಸಂಸ್ಥಾಪಕ ಹಾಗೂ ಅಧ್ಯಕ್ಷ ವಿಜಯ್ ಎಂ.ಎನ್. ಶೆಟ್ಟಿ, ಆರ್‌ವಿಆರ್ ನ್ಯೂರೋ-ಆಂಕಾಲಜಿ ತಂಡದ ಪ್ರಮುಖರಾದ ಡಾ. ವಿಗ್ನೇಶ್ ಸಂಪತ್ ಅಯ್ಯರ್, ಡಾ. ಅಬು ಟಿ. ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ವೈದ್ಯರು ಉಪಸ್ಥಿತರಿದ್ದರು.


Poll 

आप अपने सहर के वर्तमान बिधायक के कार्यों से कितना संतुष्ट है ?

View Results

Loading ... Loading ...


Related Articles